I.N.D.I.A ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ . ಹಾಗೆ ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ಕೂಡ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಗೆ ಗೈರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!