Saturday, December 20, 2025

ಬಿಹಾರ ಚುನಾವಣೆಯ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ರಹದಾರಿ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ರಹದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ,ಇಂದು ದೇಶವು ಕ್ಷಿಪ್ರ ಅಭಿವೃದ್ಧಿಯನ್ನು ಬಯಸುತ್ತಿದೆ. ಬಿಹಾರ ಮತ್ತೊಮ್ಮೆ ಎನ್‌ಡಿಎ ಸರ್ಕಾರಕ್ಕೆ ಅಭಿವೃದ್ಧಿಗಾಗಿ ಬೃಹತ್ ಜನಾದೇಶವನ್ನು ನೀಡಿದೆ. ಬಿಹಾರವು ಬಂಗಾಳದಲ್ಲಿ ಬಿಜೆಪಿಯ ಗೆಲುವಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದರು.

ಜಂಗಲ್ ರಾಜ್’ ಆಡಳಿತವನ್ನು ಬಿಹಾರ ಒಂದೇ ಧ್ವನಿಯಲ್ಲಿ ತಿರಸ್ಕರಿಸಿದೆ. 20 ವರ್ಷಗಳ ನಂತರವೂ ಅವರು ಬಿಜೆಪಿ-ಎನ್‌ಡಿಎಗೆ ಮೊದಲಿಗಿಂತ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ರಾಜಕಾರಣ ತುಂಬಿರುವ ಬಂಗಾಳದಲ್ಲಿ ಟಿಎಂಸಿಯ ‘ಮಹಾ ಜಂಗಲ್ ರಾಜ್’ ಅನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಟಿಎಂಸಿ ನನ್ನನ್ನು ಮತ್ತು ಬಿಜೆಪಿಯನ್ನು ಎಷ್ಟು ಬೇಕಾದರೂ ವಿರೋಧಿಸಲಿ, ಆದರೆ ಬಂಗಾಳದ ಪ್ರಗತಿಯನ್ನು ನಿಲ್ಲಿಸಬಾರದು ಎಂದು ಹೇಳಿದ ಪ್ರಧಾನಿ, ನುಸುಳುಕೋರರು ರಾಜ್ಯದಲ್ಲಿ ಟಿಎಂಸಿಯ ಪ್ರಾಯೋಜಕತ್ವವನ್ನು ಅನುಭವಿಸುತ್ತಿದ್ದಾರೆ ಮತ್ತು ಅವರನ್ನು ಗುರುತಿಸುವುದನ್ನು ತಡೆಯಲು SIR ಕಾರ್ಯಾಚರಣೆಯನ್ನು ವಿರೋಧಿಸುತ್ತಿದೆ ಎಂದರು.

error: Content is protected !!