Wednesday, November 19, 2025

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರಿಗಳ ಭೇಟಿಗೆ ಮುಂದಾದ ಡಿಕೆಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಚುನಾವಣೆ ಗೆ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿರುವ ಬಿಹಾರಿಗಳನ್ನು ಇಂದು (ನ.2) ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ಬಿಹಾರ ಮೂಲದ ನಿವಾಸಿಗಳನ್ನು ಡಿಕೆ ಶಿವಕುಮಾರ್ ಅವರು ಇಂದು ಸಂಜೆ 5 ಗಂಟೆಗೆ ಭೇಟಿ ಮಾಡಲಿದ್ದಾರೆ. ಈ ಮೂಲಕ ಇಂಡಿ ಒಕ್ಕೂಟದ ಪರವಾಗಿ ಡಿಕೆಶಿ ಮತಬೇಟೆ ನಡೆಸಲಿದ್ದಾರೆ.

ಕಾರ್ಮಿಕ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ 24,000 ನೋಂದಾಯಿತ ಬಿಹಾರದ ವಲಸೆ ಕಾರ್ಮಿಕರಿದ್ದಾರೆ. ಜೊತೆಗೆ ನಗರದಲ್ಲಿ ಒಟ್ಟು 8 ಲಕ್ಷಕ್ಕೂ ಹೆಚ್ಚು ಮಂದಿ ಬಿಹಾರಿಗಳು ವಾಸವಾಗಿದ್ದಾರೆ. ಈ ಪೈಕಿ ಶೇ.80ರಷ್ಟು ಮಂದಿ ನಿರ್ಮಾಣ, ಸಾರಿಗೆ, ಸಣ್ಣ ಕೈಗಾರಿಕೆ ಮತ್ತು ಆಹಾರ ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರು ಹಾಗೂ ಉಳಿದವರು ವಿವಿಧ ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಬಹುತೇಕರು ಸರ್ಜಾಪುರ, ಎಲೆಕ್ಟ್ರಾನಿಕ್ಸ್ ಸಿಟಿ, ವೈಟ್‌ಫೀಲ್ಡ್, ಯಲಹಂಕ, ಯಶವಂತಪುರ ಮತ್ತು ಪೀಣ್ಯದಂತಹ ಪ್ರದೇಶಗಳಲ್ಲಿ ವಾಸವಿದ್ದಾರೆ ಎನ್ನಲಾಗಿದೆ.

error: Content is protected !!