ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಗುರುವಾರ 44 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ನಿನ್ನೆ 57 ಅಭ್ಯರ್ಥಿಗಳನ್ನು ಘೋಷಿಸಿದ್ದ ಜೆಡಿಯು ಇಂದು 44 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ತನ್ನ ಪಾಲಿನ 101 ಅಭ್ಯರ್ಥಿಗಳ ಖೋಟಾವನ್ನು ಪೂರ್ಣಗೊಳಿಸಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಪ್ರಧಾನ ಕಚೇರಿಯ ಉಸ್ತುವಾರಿ ಚಂದನ್ ಕುಮಾರ್ ಸಿಂಗ್ ಅವರು ಇಂದು 44 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಎರಡನೇ ಪಟ್ಟಿಯಲ್ಲಿ ನವಾಡಾ ಪ್ರಭಾವಿ ರಾಜ್ವಲ್ಲಭ್ ಪ್ರಸಾದ್ ಯಾದವ್ ಅವರ ಪತ್ನಿ ವಿಭಾ ದೇವಿ ಅವರು ಸ್ಥಾನ ಪಡೆದಿದ್ದಾರೆ. ಅವರು ನವಾಡಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

