ಬಿಹಾರದ ನಕಲಿ ಮದ್ಯ ದುರಂತ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ನಕಲಿ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ಜನರು ನಕಲಿ ಮದ್ಯ ಸೇವಿಸಿದ್ದರು ತೀವ್ರ ಅಸ್ವಸ್ಥಗೊಂಡಿದ್ದರು. ಕಳೆದ ಮೂರು ದಿನಗಳಲ್ಲಿ ಸಿವಾನ್‌ನ ಭಗವಾನ್‌ಪುರ, ಮಧಾರ್ ಮತ್ತು ಕೌಂಡಿಯಾದಲ್ಲಿ 20 ಜನರ ಸಾವನ್ನು ಸಿವಾನ್ ಪೊಲೀಸ್ ವರಿಷ್ಠಾಧಿಕಾರಿ ಅಮಿತೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಸಿವಾನ್‌ನಲ್ಲಿ, ಸರ್ಕಾರಿ ಸದರ್ ಆಸ್ಪತ್ರೆಯಲ್ಲಿ 20 ಮಂದಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಸೋಮವಾರ ಮತ್ತು ಮಂಗಳವಾರ 20 ಮಂದಿ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸಂತ್ರಸ್ತರ ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ. ಅವರು ಅಕ್ರಮ ಮದ್ಯ ಸೇವಿಸಿದ ಕೂಡಲೇ ಹೊಟ್ಟೆನೋವು, ವಾಂತಿ, ವಾಕರಿಕೆ ಮತ್ತು ದೃಷ್ಟಿ ಕಳೆದುಕೊಳ್ಳುವ ಬಗ್ಗೆ ದೂರು ನೀಡಿದ್ದಾರೆ ಎಂದು ಸಂತ್ರಸ್ತರೊಬ್ಬರ ಹತ್ತಿರದ ಸಂಬಂಧಿ ತಿಳಿಸಿದ್ದಾರೆ.

ನೆರೆಯ ಸರನ್ ಜಿಲ್ಲೆಯಲ್ಲಿ, ಮಸಾರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಮದ್ಯ ಸೇವಿಸಿ ಆರು ಜನರು ಸಾವನ್ನಪ್ಪಿದ್ದರು. ಸರನ್ ಜಿಲ್ಲೆಯ ಇಬ್ರಾಹಿಂಪುರ ಗ್ರಾಮವೊಂದರಲ್ಲೇ ನಾಲ್ಕು ಸಾವುಗಳು ವರದಿಯಾಗಿವೆ. ಒಂಬತ್ತು ಅಕ್ರಮ ಮದ್ಯ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸರನ್ ಎಸ್ಪಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ಎರಡು ಗಡಿ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 49 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!