ಬಿಹಾರದ ಸರನ್ ಜಿಲ್ಲೆಯಲ್ಲಿ ಉದ್ವಿಗ್ನತೆ ಸಾಮಾಜಿಕ ಮಾಧ್ಯಮಗಳ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಹಾರ ಸರ್ಕಾರವು ಸರನ್ ಜಿಲ್ಲೆಯಲ್ಲಿ ಫೆಬ್ರವರಿ 8ರ ರಾತ್ರಿ 11 ಗಂಟೆಯವರೆಗೆ 23 ಸಾಮಾಜಿಕ ನೆಟ್‌ವರ್ಕಿಂಗ್ ಮತ್ತು ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಫೆಬ್ರವರಿ 5 ರಂದು ಬಿಹಾರದ ಛಾಪ್ರಾ ಜಿಲ್ಲೆಯ ಮಾಂಝಿಯಲ್ಲಿ ಯುವಕನೊಬ್ಬನನ್ನು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಗ್ರಾಮದ ಮುಖ್ಯಸ್ಥರ ಮನೆ ಮತ್ತು ಕೋಳಿ ಫಾರಂಗೆ ಜನಸಮೂಹ ಬೆಂಕಿ ಹಚ್ಚಲು ಕಾರಣವಾಯಿತು ಮತ್ತು ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಕಾಲ ಗಲಾಟೆ ನಡೆದಿದೆ. ಘಟನೆ ವರದಿಯಾದ ನಂತರ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಇಲ್ಲಿನ ಉದ್ವಿಗ್ನ ವಾತಾವರಣ ಕಂಡು ಬಿಹಾರ ಸರ್ಕಾರವು ಸಾಮಾಜಿಕ ಜಾಲತಾಣಗಳ ಸೇವೆಯನ್ನು ತಾತ್ಕಾಲಿಕವಾಗಿ ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ರಾಜ್ಯ ಗೃಹ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಫೇಸ್‌ಬುಕ್, ಟ್ವಿಟರ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಸೇರಿದಂತೆ 20 ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣಗಳ ಸೇವೆಯನ್ನು ನಿಷೇಧಿಸಲಾಗಿದೆ.
ಅಂತರ್ಜಾಲದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಮತ್ತು ವದಂತಿಗಳನ್ನು ಹರಡಲು ಕಾರಣವಾಗುತ್ತಿದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಸಾಮೂಹಿಕ ಸಂದೇಶಗಳನ್ನು ಹರಡಲು ಬಳಸಬಹುದಾದ ಸಾಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!