ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುರುವನ್ನು ದೇವರ ಸಮಾನ ಎಂದು ಪರಿಗಣಿಸಲಾಗಿದೆ. ಏಕೆಂದರೆ ಮಕ್ಕಳಿಗೆ ವಿದ್ಯೆ ಮತ್ತು ಸಂಸ್ಕೃತಿಯನ್ನು ಕಲಿಸುವವರು ಗುರುಗಳು. ಒಳ್ಳೆಯದು ಮತ್ತು ಮಕ್ಕಳನ್ನು ಸರಿಯಾದ ಹಾದಿಯಲ್ಲಿ ಇಡುತ್ತಾರೆ. ಇದಲ್ಲದೆ, ಶಿಕ್ಷಕ ವೃತ್ತಿಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಆದರೆ, ಈ ವಿಡಿಯೋದಲ್ಲಿ ತಮ್ಮ ನಡವಳಿಕೆಯಿಂದ ಪವಿತ್ರ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದಾರೆ.
ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕಿಯರು ತರಗತಿಯಲ್ಲಿ, ಮಕ್ಕಳ ಮುಂದೆಯೇ ಜುಟ್ಟು ಹಿಡಿದು ಹೊಡೆದಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ತರಗತಿಯಲ್ಲಿ ಕಿಟಕಿ ಮುಚ್ಚುವ ಹಾಗೂ ಹಾಜರಾತಿ ವಿಚಾರದಲ್ಲಿ ಇಬ್ಬರು ಶಿಕ್ಷಕಿಯರು ಹಾಗೂ ಪ್ರಾಂಶುಪಾಲರ ನಡುವೆ ಜಗಳ ನಡೆದಿದೆ. ಮಾತಿಗೆ ಬೆಳೆದು ಇಬ್ಬರೂ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ಶಾಲೆಯಿಂದ ಹೊರಬಂದು ನಡುರಸ್ತೆಯಲ್ಲಿ ರೌಡಿಗಳಂತೆ ಹೊಡೆದಾಡಿದ್ದಾರೆ.
ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ. ಮಕ್ಕಳಿಗೆ ಮಾದರಿಯಾಗಬೇಕಾದವರು ಇಂತಹ ನಡವಳಿಕೆಯಿಂದ ಯಾವ ಸಂದೇಶವನ್ನು ನೀಡುತ್ತಾರೆ ಎಂದು ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ.
https://twitter.com/i/status/1661777101467557888