ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ರಾಜ್ಯಪಾಲ (Bihar Governor) ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.
ಇಲ್ಲಿನ ಹಾಜಿಪುರದ ಭಗವಾನ್ಪುರದ ರತನ್ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಪಾಟ್ನಾದಿಂದ ಮುಜಾಫರ್ಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಅಗ್ನಿಶಾಮಕ ವಾಹನ ಪಲ್ಟಿಯಾಗಿದೆ. ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಾಟ್ನಾದಿಂದ ಮುಜಾಫರ್ಪುರಕ್ಕೆ ತೆರಳುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಅಗ್ನಿಶಾಮಕ ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದಿದೆ, ಬಳಿಕ ರಾಂಗ್ ಸೈಡ್ ನಲ್ಲಿ ಹೋಗಿ ಪ್ರಯಾಣಿಕರು ತುಂಬಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ರಾಜ್ಯಪಾಲರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಗ್ನಿಶಾಮಕ ವಾಹನ, ಆಟೋ ಚಾಲಕ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಸವಾರರ ಸ್ಥಿತಿ ಗಂಭೀರವಾಗಿದೆ.