ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿದ ಇನ್ನೋರ್ವ ಹಿಂದು ಮೇಲೆ ಅಟ್ಯಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರವಾದಿ ಕುರಿತಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದಕ್ಕಾಗಿ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಮತ್ತು ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಹತ್ಯೆಯಾದ ಬೆನ್ನಲ್ಲೇ ನೂಪುರ್‌ ರನ್ನು ಬೆಂಬಲಿಸಿದ್ದಕ್ಕಾಗಿ ಬಿಹಾರದ ಯುವಕನೊಬ್ಬ ಮೇಲೆ ಉನ್ಮಾದ ಮುಸ್ಲಿಂ ಗುಂಪು ಅಮಾನವೀಯವಾಗಿ ಹಲ್ಲೆ ನಡೆಸಿದೆ.
ಅರ್ರಾಹ್ ನಗರದ ದೀಪಕ್ ಕುಮಾರ್ ಎಂಬಾತ ಹಲ್ಲೆಗೊಳಗಾದ ಯುವಕ. ಆತ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ. ಇದು ರಯೀಸ್ ಎಂಬ ಆತನ ಸ್ನೇಹಿತನೊಬ್ಬನ ಕೋಪಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಆತ ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯವಾಗಿ ಟೀಕೆ ಮಾಡಿದ್ದ. ಮಂಗಳವಾರ ಸಂಜೆ ರಯೀಸ್ ಮತ್ತು ದೀಪಕ್ ಹೋಟೆಲ್‌ ಒಂದರಲ್ಲಿಚಹಾ ಸೇವಿಸುತ್ತಿದ್ದ ವೇಳೆ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಇದೇ ವಿಚಾರವಾಗಿ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ವಿಷಯ ಉಲ್ಬಣಗೊಂಡಿದೆ. ನಂತರ ರಯೀಸ್ ದೀಪಕ್ ನನ್ನು ಥಳಿಸಲು 20 ರಿಂದ 30 ಜನರನ್ನು ಕರೆತಂದಿದ್ದಾನೆ. ಆ ಗುಂಪು ದೀಪಕ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ಚಹಾ ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಗುಂಪು ದಾಳಿಯ ಬಗ್ಗೆ ಮಾಹಿತಿ ಪಡೆದ ಎಸ್‌ಡಿಎಂ ಜ್ಯೋತಿನಾಥ್ ಸಹದೇವ್ ಮತ್ತು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹಿಮಾಂಶು ಕುಮಾರ್ ನೂರಾರು ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಸ್ತುತ ಉದ್ವಿಗ್ನತೆ ಶಮನಗೊಂಡಿದ್ದು, ಪ್ರಸ್ತುತ ಪರಿಸ್ಥಿತಿ ಸಹಜವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದಾಗ್ಯೂ, ಇಡೀ ಪ್ರದೇಶವನ್ನು ಕಂಟೋನ್ಮೆಂಟ್ ಆಗಿ ಪರಿವರ್ತಿಸಲಾಗಿದೆ ಮತ್ತು ಹೆಚ್ಚಿನ ಘರ್ಷಣೆಯನ್ನು ತಪ್ಪಿಸುವ ಸಲುವಾಗಿ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಘಟನೆ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಹಿಮಾಂಶು ಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!