Wednesday, February 8, 2023

Latest Posts

ಅಕ್ರಮ ಮದ್ಯ ಮಾರಿ 70 ಜನರ ಸಾವಿಗೆ ಕಾರಣನಾದ ಮದ್ಯ ಕಳ್ಳಸಾಗಣೆದಾರನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಹಾರದ ಹೂಚ್ ದುರಂತದಲ್ಲಿ ಸಾವಿನ ಸಂಖ್ಯೆ 70 ಕ್ಕೆ ತಲುಪಿದೆ. ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸರನ್ ಜಿಲ್ಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸಿ, 2.17 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದೆ.
ಆರೋಪಿಯನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ.
ಅಕ್ರಮ ಮದ್ಯ ಸೇವನೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯ ಸಂದರ್ಭದಲ್ಲಿ ಆತ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಖಚಿತವಾಗಿದೆ.
ಈ ಹಿಂದೆಯೂ ಅಬಕಾರಿ ಕಾಯ್ದೆಯಡಿ ಮದ್ಯ ಸಾಗಾಣಿಕೆದಾರನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು.
ಬಿಹಾರದ ಸರನ್‌ನಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ ಬುಧವಾರ ವರದಿಯಾಗಿದ್ದು 70 ಕ್ಕೆ ಏರಿದೆ. ಸರನ್‌ನಲ್ಲಿ ನಡೆದ ಹೂಚ್ ದುರಂತದ ನಂತರ ರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ಬಂದಿದ್ದು, ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಮತ್ತು ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತ ಜನರನ್ನು ಗುರುತಿಸಲು ಮತ್ತು ಬಂಧಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!