ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಏರುತ್ತಿರುವ ಬಿಸಿಲು ತಾಳಲಾರದೆ ಹೀಟ್ಸ್ಟ್ರೋಕ್ನಿಂದ 19 ಮಂದಿ ಮೃತಪಟ್ಟಿದ್ದಾರೆ.
ಬಿಹಾರದ ಔರಂಗಾಬಾದ್‌ನಲ್ಲಿ ಬಿಸಿಗಾಳಿಯಿಂದ ಮೃತಪಟ್ಟವರ ಸಂಖ್ಯೆ 12 ಕ್ಕೆ ತಲುಪಿದ್ದು, ಕೈಮೂರ್ ಜಿಲ್ಲೆಯಲ್ಲಿ ಗುರುವಾರಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಭೋಜ್‌ಪುರ ಜಿಲ್ಲೆಯ ಬಿಹಾರದ ಅರ್ರಾದಲ್ಲಿ ಮೂವರು ಮೃತಪಟ್ಟಿದ್ದಾರೆ.
ಮೊಹಾನಿಯಾ ಆಸ್ಪತ್ರೆಯ ಡಾ. ಸಾಹಿಲ್ ಮಾತನಾಡಿ, ಗುರುವಾರ 40 ಮಂದಿ ಹೀಟ್ಸ್ಟ್ರೋಕ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ಶಹನವಾಜ್ ಖಾನ್ ಅವರು ಚುನಾವಣಾ ಕರ್ತವ್ಯ ಮುಗಿಸಿ ಮನೆಗೆ ಮರಳಿದ್ದರು, ಮನೆಯಲ್ಲಿ ಮಲಗಿದ್ದಲ್ಲೇ ಅಸುನೀಗಿದ್ದಾರೆ.
ಹವಾಮಾನ ಇಲಾಖೆಯು ಬಿಹಾರದಲ್ಲಿ ಮುಂದಿನ ಎರಡು ದಿನಗಳ ಕಾಲ ತೀವ್ರ ಶಾಖದ ಅಲೆಗಳ ಎಚ್ಚರಿಕೆಯನ್ನು ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಟಿದೆ.