spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಹಾರ ಮೂಲದ ಕಾರ್ಮಿಕನಿಂದ ಅಪ್ರಾಪ್ತ ವಯಸ್ಕ ಯುವತಿಗೆ ಲೈಂಗಿಕ ಕಿರುಕುಳ

- Advertisement -Nitte

ಹೊಸ ದಿಗಂತ ವರದಿ, ಮೈಸೂರು:

ಬಿಹಾರ ಮೂಲದ ಕಾರ್ಮಿಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುoಡಿ ಗ್ರಾಮದ ಫಾರ್ಮ್ಹೌಸ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಶಿವಮೊಗ್ಗದ ದಂಪತಿಯ 10 ವರ್ಷದ ಮಗಳನ್ನು ಅದೇ ಫಾರ್ಮ್ಹೌಸ್‌ನಲ್ಲಿ ಕೆಲಸ ಮಾಡುವ ಬಿಹಾರ ಮೂಲದ ನಿಜಾಮ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ನಿಜಾಮ್ ಕುದುರೆಗಳಿಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದು, ಅದೇ ಫಾರ್ಮ್ಹೌಸ್‌ನಲ್ಲಿ ಪ್ರತ್ಯೇಕ ರೂಮಿನಲ್ಲಿದ್ದ. ಈತ ಕಳೆದ ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ 10 ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ನಡೆದ ಮೂರು ದಿನಗಳ ನಂತರ ಬಾಲಕಿ ತನ್ನ ತಾಯಿಗೆ ಈ ಬಗ್ಗೆ ಹೇಳಿಕೊಂಡಿದ್ದಾಳೆ.
ಆರೋಪಿ ನಿಜಾಮನು ಅಪ್ರಾಪ್ತೆಗೆ 3-4 ಬಾರಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನ್ನು ಸಹ ಬಾಲಕಿ ತನ್ನ ತಾಯಿಯ ಬಳಿ ತಿಳಿಸಿದ್ದಾಳೆ.
ಈ ವಿಷಯ ಕೇಳಿ ಅಘಾತಗೊಂಡ ತಾಯಿ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿ ನಿಜಾಮ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss