ಬಿಹಾರ: ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿ ಗಾಯಕಿ ಮೇಲೆ ಸಾಮೂಹಿಕ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಹಾರ ರಾಜಧಾನಿ ಪಾಟ್ನಾದಲ್ಲಿ 28 ವರ್ಷದ ಗಾಯಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತೆಯು ಬಿಹಾರದ ಜಹಾನಾಬಾದ್ ಜಿಲ್ಲೆಯವರಾಗಿದ್ದು, ಹುಟ್ಟುಹಬ್ಬ, ಮದುವೆ ಮತ್ತಿತರೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಗಾಯನ ಗೋಷ್ಠಿಗಳನ್ನು ನಡೆಸಿಕೊಡುತ್ತಾರೆ. ಪಾಟ್ನಾದ ಮಂಟಪವೊಂದರಲ್ಲಿ ನಡೆಯುತ್ತಿರುವ ಮದುವೆ ಸಮಾರಂಭದಲ್ಲಿ ಕಾರ್ಯಕ್ರಮ ನಡೆಸಿಕೊಡುವಂತೆ ಆರೋಪಿಗಳು ಕೇಳಿಕೊಂಡಿದ್ದರು. ಅದರಂತೆ ಮದುವೆ ಮಂಟಪಕ್ಕೆ ಹೋದಾಗ ಅಲ್ಲಿ ಅಂತಹ ಯಾವುದೇ ಕಾರ್ಯಕ್ರಮ ನಡೆಯುತ್ತಿಲ್ಲ ಎಂಬುದು ಗಾಯಕಿಗೆ ತಿಳಿದುಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಆರೋಪಿಗಳು ಆಕೆಗೆ ಬಂದೂಕು ತೋರಿಸಿ ಕೋಣೆಯೊಳಗೆ ಎಳೆದೊಯ್ದು ಒಬ್ಬೊಬ್ಬರಾಗಿ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಾವು ಅತ್ಯಾಚಾರ ಎಸಗುತ್ತಿರುವುದನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ಹೇಗೋ ಅವರಿಂದ ತಪ್ಪಿಸಿಕೊಂಡು ಇನ್ನೊಂದು ಕೋಣೆಯಲ್ಲಿ ಬೀಗ ಹಾಕಿಕೊಂಡಿದ್ದಾರೆ. ನಂತರ ಪೊಲೀಸ್ ಕಂಟ್ರೋಲ್ ರೂಂಗೆ ಸಂಪರ್ಕಿಸಿ ಅಪರಾಧದ ಬಗ್ಗೆ ಮಾಹಿತಿ ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳಾದ ಸಂಜೀವ್ ಕುಮಾರ್, ಪಿಂಟು ಕುಮಾರ್ ಮತ್ತು ಕರು ಕುಮಾರ್ ನನ್ನು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಮತ್ತು 34 (ಕ್ರಿಮಿನಲ್ ಪಿತೂರಿ) ಶಸ್ತ್ರಾಸ್ತ್ರ ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!