ಇಂದು ಬಿಹಾರದ ಸಂಪುಟ ವಿಸ್ತರಣೆ: ಯಾರ್ಯಾರಿಗೆ ಎಷ್ಟೆಷ್ಟು ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ಆರ್‌ಜೆಡಿಯ ತೇಜಸ್ವಿಯಾದವ್‌ ಅವರೊಂದಿಗೆ ಕೈ ಜೋಡಿಸಿ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಅವರ ನೂತನ ಸರ್ಕಾರದ ಸಂಪುಟ ವಿಸ್ತರಣೆ ಇಂದು ನಡೆಯಲಿದ್ದು ಎಲ್ಲರ ಚಿತ್ತ ಸಂಪುಟ ವಿಸ್ತರಣೆಯತ್ತಲಿದೆ.

ಆಗಸ್ಟ್ 10 ರಂದು ರಾಜಭವನದಲ್ಲಿ ನಡೆದ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಖಾತೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ, ಆದರೆ ಆರ್‌ಜೆಡಿ ಹೆಚ್ಚಿನ ಇಲಾಖೆಗಳನ್ನು ಪಡೆಯಬಹುದು ಎನ್ನಲಾಗಿದೆ. ಮೂಲಗಳ ಪ್ರಕಾರ ಬಿಹಾರ ವಿಧಾನಸಭೆಯಲ್ಲಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಆರ್‌ಜೆಡಿ 16 ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಮತ್ತು ಜೆಡಿಯು 11 ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಜಿತನ್ ರಾಮ್ ಮಾಂಝಿ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಒಂದು ಸಚಿವ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ ಮತ್ತು ಮಹಾಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ಗೆ ಎರಡು ಕ್ಯಾಬಿನೆಟ್ ಸ್ಥಾನಗಳು ದೊರೆಯುವ ಸಾಧ್ಯತೆಯಿದೆ. ಒಬ್ಬ ಸ್ವತಂತ್ರ ಸೇರಿದಂತೆ ಒಟ್ಟು 31 ಶಾಸಕರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!