Wednesday, October 8, 2025

18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದಲ್ಲಿ ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಸುಮಾರು 18 ಪ್ರಕರಣದಲ್ಲಿ ಬೇಕಾಗಿದ್ದ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ಮನೋಜ್ ಸದಾ ಎಂದು ಗುರುತಿಸಲಾಗಿದೆ. ಈತ ನಕ್ಸಲ್ ಚಟುವಟಿಕೆಯಲ್ಲಿ ತೊಂಡಗಿರುವ ಶಂಕೆಯೂ ಇದೆ.

ಬಿಹಾರದ ಖಗಾರಿಯಾ ಜಿಲ್ಲೆಯ ಅಲೌಲಿ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ರಾಯಚೂರು ಗ್ರಾಮೀಣ ಠಾಣೆ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಬಿಹಾರದಿಂದ ತಲೆಮರೆಸಿಕೊಂಡು ಬಂದಿದ್ದ ಆರೋಪಿ ರಾಯಚೂರಿನ ಯರಮರಸ್‌ ಕೈಗಾರಿಕಾ ವಲಯದ ರೈಸ್ ಮಿಲ್ಲೊಂದರಲ್ಲಿ ಕೆಲಸ ಮಾಡುತ್ತಿದ್ದ.

ಆರೋಪಿ ಬಳಿ ಎಕೆ 47 ನಂತಹ ಶಸ್ತ್ರಾಸ್ತ್ರಗಳನ್ನ ಹೊಂದಿರುವ ಅನುಮಾನದ ಮೇಲೆ ಪೂರ್ವತಯಾರಿ ಮಾಡಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಕಾರ್ಯಾಚರಣೆ ವೇಳೆ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಬಿಹಾರ ಪೊಲೀಸರು ಆರೋಪಿಯನ್ನ ಜಿಲ್ಲಾ ನ್ಯಾಯಾಲಯದ ಎದುರು ಹಾಜರು ಪಡಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

error: Content is protected !!