ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಕನೇರ್- ಗುವಾಹಟಿ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 9 ಕ್ಕೇರಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬಿಕನೇರ್-ಗುವಾಹಟಿ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆಯೂ ಏರಿದ್ದು, ಗಾಯಗೊಂಡವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ಅಸ್ಸಾಂ ಕಡೆ ತೆರಳುತ್ತಿದ್ದ ಬಿಕನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ಎರಡು 12ಬೋಗಿಗಳು ಹಳಿ ತಪ್ಪಿದ್ದವು. ಈ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟಿದ್ದರು. ಇನ್ನು ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಈ ಬಗ್ಗೆ ಟಿಎಂಸಿ ಸಂಸದ ಸೌಗತ ರಾಯ್ ಮಾತನಾಡಿದ್ದು, ಒಂದು ವೇಳೆ ರೈಲ್ವೆ ಹಳಿಯಲ್ಲಿ ಬಿರುಕು ಇದ್ದಿದ್ದು ಹೌದಾದರೆ, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಅಧಿಕಾರಿಗಳಿಗೆ ಕರೆ ಮಾಡಿ, ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬಕ್ಕೆ ಭಾರತೀಯ ರೈಲ್ವೆ ೫ ಲಕ್ಷ ರೂ. ಪರಿಹಾರ ಘೋಷಿಸಿದೆ.