ಕೂಡುಮಂಗಳೂರಿನಲ್ಲಿ ಬೈಕ್ ಅವಘಡ: ಯುವಕ ಸಾವು

ಹೊಸದಿಗಂತ ವರದಿ,ಕುಶಾಲನಗರ:

ಕಳೆದ ಮೂರು ದಿನಗಳ ಹಿಂದೆ ಬೈಕ್ ಅಘಡಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಬುಧವಾರ ಸಾವಿಗೀಡಾಗಿದ್ದಾರೆ.
ಕೂಡುಮಂಗಳೂರು ಗ್ರಾಮ ಪಂಚಾಯತಿಯ ಹಾರಂಗಿ ಗ್ರಾಮದ ರಾಜೇಶ್ ಎಂಬವರ ಪುತ್ರ ಸುದೀಪ್( 20) ಮೃತ ಯುವಕ.
ಕಳೆದ ಮೂರು ದಿನಗಳ ಹಿಂದೆ ಗುಡ್ಡೆಹೊಸೂರು-ಹಾರಂಗಿ ರಸ್ತೆಯಲ್ಲಿ ಬೈಕ್ ಅವಘಡ ವಾಗಿ ತಲೆ ಮತ್ತು ಇತರೆ ಭಾಗಕ್ಕೆ ಪೆಟ್ಟಾಗಿತ್ತು. ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗಾಯಾಳುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!