Tuesday, August 16, 2022

Latest Posts

ಮಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ದಿಗಂತ ವರದಿ ಮಂಗಳೂರು:

ನಗರದ ಪದವಿನಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾನೆ.
ಕೆಪಿಟಿ ಬಳಿಯ ಶರಬತ್ತ್ ಕಟ್ಟೆ ಬಳಿಯ ನಿವಾಸಿ ಪ್ರಶಾಂತ್ ಸಾಮಂತ್ ಮೃತ ಯುವಕ. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಒನ್ ವೇಯಲ್ಲಿ ಸ್ಕೂಟಿ ಸವಾರನೊಬ್ಬ ರಸ್ತೆ ಕ್ರಾಸ್ ಮಾಡಲು ಯತ್ನಿಸಿದ್ದು , ಇದೇ ವೇಳೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಪ್ರಶಾಂತ್ ಸ್ಕೂಟಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲೆತ್ನಿಸಿದ್ದಾನೆ. ನಿಯಂತ್ರಣ ತಪ್ಪಿದ ಪ್ರಶಾಂತ್ ಚಲಾಯಿಸುತ್ತಿದ್ದ ಬೈಕ್ ಪಕ್ಕದ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪ್ರಶಾಂತ್ ಎತ್ತರಕ್ಕೆ ಎಸೆಯಲ್ಪಟ್ಟಿದ್ದು, ಬಳಿಕ ರಸ್ತೆಗೆ ಅಪ್ಪಳಿಸಿದ್ದಾನೆ. ಇದೇ ವೇಳೆ ಬಂದ ಮತ್ತೊಂದು ಬೈಕ್ ಪ್ರಶಾಂತ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದ್ದು, ಆತ ಕೂಡ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss