ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್ ಒಂದನ್ನು ಮುಗಿಸಿಕೊಂಡು ಕುಣಿಗಲ್ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.