17 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್‌
ದೆಹಲಿಯಲ್ಲಿ ಮೋಹನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 17 ವರ್ಷದ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
ಸಂತ್ರಸ್ತೆ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆ ತನಗೆ ಪರಿಚಯವಿರುವ ಇಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.
ಮೋಹನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಕರೆ ಬಂದಿತ್ತು. ಇಂದು ಬೆಳಗ್ಗೆ 7:30ರ ಸುಮಾರಿಗೆ ಆಕೆಯ ಮೇಲೆ ಆಸಿಡ್ ದಾಳಿ ನಡೆದಿದೆ ಎನ್ನಲಾಗಿದೆ. ಘಟನೆಯ ವೇಳೆ ಅಪ್ರಾಪ್ತ ಬಾಲಕಿ ತನ್ನ ತಂಗಿಯೊಂದಿಗೆ ಇದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು, ಆಯೋಗವು ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಹೋರಾಡಲಿದೆ ಎಂದು ಹೇಳಿದ್ದಾರೆ.
ಸಂತ್ರಸ್ತೆಯ ಕಿರಿಯ ಸಹೋದರಿಯ ಪ್ರಕಾರ, “ನಾನು ಮತ್ತು ನನ್ನ ಸಹೋದರಿ ಬೆಳಿಗ್ಗೆ 7:32 ರ ಸುಮಾರಿಗೆ ಶಾಲೆಗೆ ಹೋಗುತ್ತಿದ್ದೆವು. ಇದ್ದಕ್ಕಿದ್ದಂತೆ ಅವಳ ಕಿರುಚಾಟ ನನಗೆ ಕೇಳಿಸಿತು. ನಾನು ಅವಳ ಮುಖ ನೋಡಿ ಗಾಬರಿಗೊಂಡು ನಮ್ಮ ತಂದೆಗೆ ಕರೆ ಮಾಡಿದೆ. ನಂತರ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ಯಲಾಯಿತು. ಬೈಕಿಗೆ ನಂಬರ್ ಪ್ಲೇಟ್ ಇರಲಿಲ್ಲ. ದಾಳಿನಡೆಸಿದ ಇಬ್ಬರು ಹಿಂದಿನಿಂದಲೂ ತಿಳಿದವರು. ನನ್ನ ತಂದೆಗೂ ಅವರ ಪರಿಚಯವಿತ್ತು. ಎಂದು ಹೇಳಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!