ಹೊಸದಿಗಂತ ವರದಿ, ವಿಜಯಪುರ:
ಬೈಕ್‌ಗೆ ಕಾರು ಡಿಕ್ಕಿಯಾಗಿ, ಬಳಿಕ ಅರ್ಧ ಕಿಲೋಮೀಟರ್ ಎಳೆದುಕೊಂಡು ಹೋಗಿದ್ದು, ಬೈಕ್ ಸವಾರ ಭೀಕರವಾಗಿ ಸಾವಿಗೀಡಾದ ಘಟನೆ ನಗರದ ಮನಗೂಳಿ ಅಗಸಿ ಬಳಿ ಗುರುವಾರ ಸಂಜೆ ನಡೆದಿದೆ.
ಮೃತಪಟ್ಟವನನ್ನು ಇಂಡಿ ತಾಲೂಕಿನ ಅಗರಖೇಡ ಗ್ರಾಮದ ನಿವಾಸಿ, ವಕೀಲ ರವಿ ಮೇಲಿನಕೇರಿ (45) ಎಂದು ಗುರುತಿಸಲಾಗಿದೆ.
ಈ ಘಟನೆ ನಡೆಯುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ.
ವಿಜಯಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.