ಬೈಕ್, ಕಾರು ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೈಕ್ ಸವಾರನನ್ನು ಜಿಲ್ಲಾ ಕಾರಾಗೃಹ ಸಿಬ್ಬಂದಿ ರುದ್ರಪ್ಪ ಸಿದ್ದಣ್ಣವರ ಎಂದು ಗುರುತಿಸಲಾಗಿದೆ.

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರುದ್ರಪ್ಪ ಅವರು ಕರ್ತವ್ಯ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!