ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ನ್ನು ಚಿಕ್ಕೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜೈನಮುನಿಗಳ ಹತ್ಯೆ ಮಾಡಿದ ದುಷ್ಕರ್ಮಿಗಳು, ಅವರ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಯ ಭಾಗವಾಗಿ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ಬಂಧಿತ ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here