Sunday, December 3, 2023

Latest Posts

ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಿಬಿಎಂಪಿ ಕಸದ ಲಾರಿಗೆ ಅತಿ ವೇಗವಾಗಿ ಬೈಕ್‌ನಲ್ಲಿ ಬಂದು ಗುದ್ದಿದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬನಶಂಕರಿ ಮಾರ್ಗದಿಂದ ಸೌತ್ ಎಂಡ್ ಸರ್ಕಲ್ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತ ದುರ್ದೈವಿ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌, ಲಾರಿಯ ಹಿಂಬದಿಯಲ್ಲಿ ಅರ್ಧದಷ್ಟು ಒಳಗೆ ಹೋಗಿ ಸಿಲುಕಿಕೊಂಡಿದೆ. ಹೀಗಾಗಿ ಪೊಲೀಸರು ನಾಲ್ಕೈದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ
ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!