ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
25 ವಯಸ್ಸಿನ ಮೋನಿಕಾ ಮೃತ ಮಹಿಳೆ. ಬಿಎಂಟಿಸಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜೊತೆಗೆ ಮಹಿಳೆ ಬಸ್‌ನ ಬಲಭಾಗಕ್ಕೆ ಬಿದ್ದಿದ್ದಾರೆ. ಪರಿಣಾಮ ಎದುರುಗಡೆಯಿಂದ ಬರುತ್ತಿದ್ದ ಕಾರು ಬಸ್‌ಗೆ ಗುದ್ದಿ ರಸ್ತೆಯಲ್ಲಿ ಬಿದ್ದ ಮಹಿಳೆಯ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಬಿಎಂಟಿಸಿ ಬಸ್ ಉಲ್ಲಾಳ ಉಪನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆ ಹೋಗುವಾಗ ಉಲ್ಲಾಳ ಕೆರೆಯ ಬಳಿ ಅಪಘಾತ ಸಂಭವಿಸಿದೆ.
ಸಿಂಗಲ್ ರೋಡ್‌ನಲ್ಲಿ ಆತುರವಾಗಿ ಬಂದ ಮಹಿಳೆ ಎದುರುಗಡೆಯಿಂದ ಬರುತ್ತಿದ್ದ ನಮ್ಮ ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆ ಮೇಲೆ ಬಿದ್ದಾಗ ಎದುರುಗಡೆ ಬರುತ್ತಿದ್ದ ಕಾರು ಹರಿದು ಮಹಿಳೆ ಮೃತಪಟ್ಟಿದ್ದಾರೆ.