ಹೊಸ ದಿಗಂತ ವರದಿ, ವಿಜಯಪುರ:
ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಜಿಲ್ಲೆಯ ಕನ್ನಡಪರ ಹೋರಾಟಗಾರ ಪ್ರಕಾಶ ಕುಂಬಾರ ದಾರುಣ ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ನಾಗಠಾಣ ಬಳಿ ಗುರುವಾರ ನಡೆದಿದೆ.
ಇಲ್ಲಿನ ಸೊಲ್ಲಾಪುರ ರಸ್ತೆಯ ಶಾಂತಿ ನಗರದ ನಿವಾಸಿ ಪ್ರಕಾಶ ಕುಂಬಾರ (56) ಮೃತಪಟ್ಟ ದುರ್ದೈವಿ.
ಜಿಲ್ಲೆಯ ಇಂಡಿಯಿಂದ ವಿಜಯಪುರಕ್ಕೆ ಬರುವ ಮಾರ್ಗದ ನಾಗಠಾಣ ಬಳಿ ಈ ಅಪಘಾತ ಸಂಭವಿಸಿದ್ದು, ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಕಾಶ ಕುಂಬಾರ ಕನ್ನಡಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡು, ಜಿಲ್ಲೆ ಹಾಗೂ ನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ನಡೆಸಿದ್ದರು.