ಹೊಸದಿಗಂತ ವರದಿ, ರಾಮನಗರ
ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ವಂದಾರಗುಪ್ಪೆ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಅಮರೇಶ(49), ಏರ್ಪೋರ್ಟ್ ಕಾರು ಚಾಲಕ ಕಾಂತರಾಜ(47) ಮೃತಪಟ್ಟವರು ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇಬ್ಬರ ಮೃತದೇಹಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ