Friday, November 21, 2025

ಜಗಳವಾಡುತ್ತಾ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.

ಮೃತ ಯುವತಿಯನ್ನು ಪ್ರಿಯಾ (21) ಹಾಗೂ ಗಾಯಗೊಂಡ ಯುವಕನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ. 

ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್‌ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.

error: Content is protected !!