ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಲಾವೃತವಾದ ಮಾರ್ಕಂಡೇಯ ನದಿಗೆ ಬೈಕ್ ಬಿದ್ದ ಘಟನೆ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23) ನಾಪತ್ತೆಯಾದವ, ಜ್ಯೋತಿನಾಥ್ ಪಾಟೀಲ ಈಜಿ ದಡ ಸೇರಿದವ. ಸದ್ಯ ನಾಪತ್ತೆಯಾಗಿರುವ ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಬೆಳಗಾವಿ ತಾಲೂಕಿನ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಡಿಸಿಪಿ ಪಿವಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.