ಹೊಸದಿಗಂತ ಸುಂಟಿಕೊಪ್ಪ:
ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಸಮೀಪದ ಶಾಂತಿಗೇರಿಯಲ್ಲಿ ನಡೆದಿದೆ.
ಮೃತರನ್ನು ಪಿರಿಯಾಪಟ್ಟಣ ತಾಲೂಕಿನ ನವಿಲೂರು ನಿವಾಸಿಗಳಾದ ಆಕಾಶ್ ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ.
ಪಿರಿಯಾಪಟ್ಟಣದಿಂದ ಮಡಿಕೇರಿಗೆ ಸೆಂಟ್ರಿಂಗ್ ಕೆಲಸಕ್ಕೆಂದು ಬರುತ್ತಿದ್ದಾಗ ರಾತ್ರಿ 10ಗಂಟೆ ಸುಮಾರಿಗೆ
ಶಾಂತಿಗೇರಿ ಬಳಿ ನಿಂತ್ರಣ ಕಳೆದುಕೊಂಡ ಬೈಕ್, ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ. ಈ ಸಂದರ್ಭ ಆಕಾಶ್ ಸ್ಥಳದಲ್ಲೇ ಸಾವಿಗೀಡಾದರೆ, ಚಿಂತಾಜನಕ ಸ್ಥಿತಿಯಲ್ಲಿದ್ದ ಪ್ರಸನ್ನ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದ್ದಾನೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.