Saturday, February 4, 2023

Latest Posts

ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಯುವಕ ಸಾವು

ಹೊಸದಿಗಂತ ವರದಿ,ಅಂಕೋಲಾ:

ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತ ಪಟ್ಟ ಘಟನೆ ತಾಲೂಕಿನ ಬೆಲೇಕೇರಿ ರಸ್ತೆಯಲ್ಲಿ ರವಿವಾರ ಸಂಜೆ ಸಂಭವಿಸಿದೆ.
ಬೆಲೇಕೇರಿ ನಿವಾಸಿ ಸಾಹಿಲ್ ನಾಗೇಶ ನಾಯ್ಕ(23)ಮೃತ ಯುವಕನಾಗಿದ್ದು ಡಿಪ್ಲೊಮಾ ಪದವೀಧರರಾದ ಈತ ಗೋವಾದ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದು ರಜೆಯ ಮೇಲೆ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಈತ ತನ್ನ ಮನೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಆಲದಮರ ಕ್ರಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!