ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲಗೂರು ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಪೈಪ್‌ಲೈನ್ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಚಿಕ್ಕ ಎಲಚಗೆರೆ ಗ್ರಾಮದ ರಾಚಾಪ್ಪಾಜಿ ಅವರ ಪುತ್ರ ಸೂರ್ಯ ಪ್ರಕಾಶ್ (19) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಸೂರ್ಯ ಪ್ರಕಾಶ್ ಅವರು ತಮ್ಮ ಸ್ನೇಹಿತರೊಂದಿಗೆ ಸ್ವಗ್ರಾಮದಿಂದ ಕಾರ್ಯ ನಿಮಿತ್ತ ಬೈಕ್‌ನಲ್ಲಿ ಸಾತನೂರಿಗೆ ತೆರಳುತ್ತಿದ್ದಾಗ, ದಳವಾಯಿ ಕೋಡಿಹಳ್ಳಿ ಬಳಿ ಎದುರಿನಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಿಂಬದಿ ಸವಾರ ಸೂರ್ಯ ಪ್ರಕಾಶ್ ಅವರು ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೈಕ್ ಸವಾರ ಸಿ.ಎನ್.ಕೆಂಪೇಗೌಡ ಅವರನ್ನು ತಕ್ಷಣವೇ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುವಕನ ದುರ್ಮರಣದಿಂದಾಗಿ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

