ನೀರಿನ ಟ್ಯಾಂಕರ್‌ ಗೆ ಬೈಕ್‌ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಹೊಸದಿಗಂತ ವರದಿ, ಹುಬ್ಬಳ್ಳಿ:

ನಗರದ ಕೇಶ್ವಾಪೂರ ಪೂರ್ವ ಪೊಲೀಸ್ ಠಾಣೆಯ ಬಳಿ ನಿಲ್ಲಿಸಿದ್ದ ನೀರಿನ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ನೀರಿನ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸಿ ಉಪಹಾರಕ್ಕೆಂದು ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಪರಿಣಾಮ ವೃದ್ಧ ಬೈಕ್ ಸವಾರನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು, ಅವರಿಗೆ ಅತೀವ ರಕ್ತಸ್ರಾವವಾಗಿದೆ.
ಗಾಯಗೊಂಡ ವೃದ್ಧನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ ನೀಡಿದ್ದು, ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!