ಹೊಸದಿಗಂತ ವರದಿ, ವಿಜಯಪುರ:
ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಗರದ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಅನಿಲ ಚವ್ಹಾಣ (35), ಶಿವಾಜಿ ಚವ್ಹಾಣ (40) ಎಂದು ಗುರುತಿಸಲಾಗಿದೆ.
ಈ ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ರೋಧನ ಮುಗಿಲು ಮುಟ್ಟುವಂತಾಗಿತ್ತು.
ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.