ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಇದು ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಇದು ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರಿಗೆ ಸೊತ್ತುಗಳು ಎಂದು ಗೊತ್ತಾಗಿದೆ.
ರಮೇಶ್ ರೈ, ಇತ್ತೀಚಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ.
ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.