ಸಂವಿಧಾನ ಜಾಗೃತಿಗಾಗಿ ಚಿತ್ರದುರ್ಗದಲ್ಲಿ ಬೈಕ್ ರ‍್ಯಾಲಿ

ಹೊಸ ದಿಗಂತ ವರದಿ, ಚಿತ್ರದುರ್ಗ:

ಸಂವಿಧಾನ ಜಾಗೃತಿಗಾಗಿ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿ ಗಮನ ಸೆಳೆಯಿತು.

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯಿಂದ ಪ್ರಾರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಬೈಕ್ ರ‍್ಯಾಲಿಯು ಮದಕರಿ ನಾಯಕ ವೃತದ ಮೂಲಕ ಸಾಗಿ ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಗಾಂಧಿ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯ ಕನಕ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಅದ್ದೂರಿಯಾಗಿ ಜಾಗೃತಿ ಜಾಥಾ ನಡೆಯಿತು.

ಭಾರತ ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಬೈಕ್ ರ‍್ಯಾಲಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ನಿಲಯಪಾಲಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!