ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಯಶವಂತಪುರದಲ್ಲಿ ನಡೆದಿದೆ.
ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.
ಕಾರು ಟಚ್ ಆಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ, ಈ ವೇಳೆ ಬರುತ್ತಿದ್ದ ಬಿಎಂಟಿಸಿ ಬಸ್ ಆತನ ಮೇಲೆ ಹರಿದಿದೆ.
ಘಟನೆ ನಡೆದ ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.