ಸಿಲಿಕಾನ್ ಸಿಟಿಯಲ್ಲಿ ಕ್ಯಾಂಟರ್ ಹರಿದು ಬೈಕ್ ಸವಾರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕ್ಯಾಂಟರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
19 ವರ್ಷದ ಸೋಹಿಲ್ ಬಿಸ್ವಾಸ್ ಮೃತ ಯುವಕ. ಕನಕಪುರ ರಸ್ತೆಯ ಯೂನಿಟೆಕ್ ಗೇಟ್ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ
ಕ್ಯಾಂಟರ್ ಹರಿದು ಅಪಘಾತ ಸಂಭವಿಸಿದೆ.
ಪಶ್ಚಿಮ ಬಂಗಾಳ ಮೂಲದ ಸೋಹಿಲ್ ಕಾಂಕ್ರೀಟ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ. ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸೋಹಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!