October 5, 2026
Monday, October 5, 2026
spot_img

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ನಗರದ ಶಿರಮಗೊಂಡನಹಳ್ಳಿ ರಸ್ತೆ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಗದಗ ಜಿಲ್ಲೆಯ ಶಿಂಗ್ಲಿ ಗ್ರಾಮದ ನಿವಾಸಿ ಮಂಜುನಾಥ್ (27) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಜುನಾಥ್ ತನ್ನ ಬೈಕ್‌ನಲ್ಲಿ ಗದಗದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.

Must Read