ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಹೊಸದಿಗಂತ ವರದಿ, ಮೈಸೂರು:

ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೊಳಘಟ್ಟ ಬಳಿ ಶುಕ್ರವಾರ ನಡೆದಿದೆ. ಉಯಿಗೌಡನಹಳ್ಳಿ ಗ್ರಾಮದ ಹರೀಶ್ ಮೃತ ದುರ್ದೈವಿ.

ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹರೀಶ್ ಡ್ಯೂಟಿ ಮುಗಿಸಿಕೊಂಡು ಮರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಹರೀಶ್ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!