ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ರ‍್ಯಾಶ್ ಡ್ರೈವಿಂಗ್‌ಗೆ 24 ವರ್ಷದ ಯುವಕ ಬಲಿಯಾಗಿದ್ದಾನೆ.
ಅತಿಯಾದ ವೇಗ ಹಾಗೂ ಅಜಾಗರುಕತೆಯಿಂದ ಬಸ್ ಓಡಿಸಿದ್ದು, ಭರತ್ ರೆಡ್ಡಿ ಎಂಬಾತ ಮೃತಪಟ್ಟಿದ್ದಾರೆ. ಯಲಹಂಕದ ಡಿ ಮಾರ್ಟ್ ಬಳಿ ಸ್ಕೂಟರ್‌ನಲ್ಲಿ ಭರತ್ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಭರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರು ಬಿಎಂಟಿಸಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.