ಬೈಕ್ ಸವಾರನ ಹೆಲ್ಮೆಟ್ ಒಡೆದು ಆಕ್ರೋಶ: ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೈಡ್ರಾಮಾ

ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆ ವೇಳೆ ಬೈಕ್ ಸವಾರನೊಬ್ಬನ ಹೆಲ್ಮೆಟ್ ಅನ್ನು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ನೆಲಕ್ಕೆ ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತರು ರೈತರ ಪರ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನೊಬ್ಬ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದ ಮಧ್ಯೆಯೇ ವಾಹನ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದು ಪ್ರಶ್ನಿಸಿದ್ದಾರೆ. … Continue reading ಬೈಕ್ ಸವಾರನ ಹೆಲ್ಮೆಟ್ ಒಡೆದು ಆಕ್ರೋಶ: ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೈಡ್ರಾಮಾ