ಬೈಕ್-ಸ್ಕೂಟರ್ ಮುಖಾಮುಖಿ ಡಿಕ್ಕಿ: ಯೋಧನ ಸ್ಥಿತಿ ಗಂಭೀರ

ಹೊಸ ದಿಗಂತ ವರದಿ, ಸೋಮವಾರಪೇಟೆ:

ಬೈಕ್ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣ ಸಮೀಪದ ನಗರೂರುವಿನಲ್ಲಿ ನಡೆದಿದೆ.
ಐಗೂರು ನಿವಾಸಿ ಸಿ.ಆರ್.ಪಿ.ಎಫ್. ಯೋಧ ಡಾಲು ಅವರ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಗಾಯಗೊಂಡಿರುವ ಮನೋಜ್ ಹಾಗೂ ಆಸಿಫ್ ಎಂಬವರಿಗೆ ಮಡಿಕೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!