ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಿಂದ ಬಂದಿದ್ದ ಇಬ್ಬರು ಬೈಕ್ ಸವಾರರು ದಾವಣಗೆರೆ ಬಳಿ ಅಪಘಾತಕ್ಕೀಡಾಗಿ ದುರಂತ ಅಂತ್ಯ ಕಂಡಿದ್ದಾರೆ.
ದಾವಣಗೆರೆಯ ಎಸ್.ಎಸ್. ಆಸ್ಪತ್ರೆ ಪಕ್ಕದ ರೈಲ್ವೆ ಬ್ರಿಡ್ಜ್ ಬಳಿ ಯುವಕರ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬ್ರಿಡ್ಜ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಬ್ರಿಡ್ಜ್ ಮೇಲಿಂದ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ.
ಇದೇ ವೇಳೆ ಕಾರು ಹರಿದು ಇಬ್ಬರೂ ಮೃತಪಟ್ಟಿದ್ದಾರೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.