ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿಗೆ ಅಡ್ಡಲಾಗಿರುವ ಸೇತುವೆ ಮೇಲೆ ನಡೆದಿದೆ.
ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ್ದಾರೆ.
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ. ನದಿಯಲ್ಲಿನ ಜಯಶ್ರೀ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ