ಬೈಕ್ -ಟ್ಯಾಂಕರ್ ಡಿಕ್ಕಿ: ಮೆಡಿಕಲ್ ವಿದ್ಯಾರ್ಥಿ ಸಾವು

ಹೊಸದಿಗಂತ ವರದಿ ಮಡಿಕೇರಿ:

ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
ಮೃತರನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಹಾಗೂ ಶಿವಾನಂದ್ ಬೈಕ್‌ನಲ್ಲಿ ಮಡಿಕೇರಿಗೆ ಆಗಮಿಸುತ್ತಿದ್ದ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿತ್ತು.
ಈ ಸಂದರ್ಭ ಬೈಕ್ ಸವಾರ ವಿಜೇಶ್ ಹಾಗೂ ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ವಿಜೇಶ್ ಸಾವಿಗೀಡಾಗಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here