ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಹಾವೇರಿ ಮೂಲದ
ರ‍್ಯಾಪಿಡೋ ಬೈಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್‌ನಲ್ಲಿ ಹೋಗುವಾಗ ಚಾಲಕ ಅನುಚಿತವಾಗಿ ವರ್ತಿಸಿ, ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಾವೇರಿಯ ಗುರುವೆಂಕಟಪ್ಪ ಎಂದು ಗುರುತಿಸಲಾಗಿದೆ.
ರ‍್ಯಾಪಿಡೋ ಬೈಕ್ ಮೂಲಕ ಯುವತಿಗೆ ಡ್ರಾಪ್ ನೀಡುವ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಳು. ಯುವತಿಯ ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಅಥಿರಾ ಪುರುಷೋತ್ತಮನ್ ಲೈಂಗಿಕ ಕಿರುಕುಳಕ್ಕೊಳಗಾದ ಯುವತಿ. ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಖಂಡಿಸಿ ನಗರದ ಟೌನ್ ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಯುವತಿ ಅಥಿರಾ ಪುರುಷೋತ್ತಮನ್, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮನೆಗೆ ಹೋಗಲು ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಎಂದು ಯುವತಿ ಆರೋಪಿಸಿದ್ದಳು.