ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಕೂಡ ಬಿಡುಗಡೆ ಮಾಡಿದೆ.
ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.
ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ.
ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.