ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಕೆ.ಆರ್. ಪೇಟೆ :
ಕಾರು-ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಬಳಿಯ ಸೇತುವೆ ಸಮೀಪದ ಸಂತೃಪ್ತಿ ಡಾಬಾ ಬಳಿ ನಡೆದಿದೆ.
ಮುರುಕನಹಳ್ಳಿ ಗ್ರಾಮದ ಎಳನೀರು ಕೀಳುವ ಕೂಲಿ ಕಾರ್ಮಿಕ ತಿರುಮಲ (45) ಗಂಭೀರವಾಗಿ ಗಾಯಗೊಂಡರೆ ಹಿಂಬದಿ ಸವಾರ ಚಿಕ್ಕಣ್ಣ ಲಿಯಾಸ್ ಕುಳ್ಳಪ್ಪ (64) ಎಂಬುವರು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮುರುಕನಹಳ್ಳಿಯಿಂದ ಕೆ.ಆರ್.ಪೇಟೆ ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಮೈಸೂರಿಗೆ ಹೋಗುತ್ತಿದ್ದ ಸ್ವ್ಟಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಿರುಮಲ ಅವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಇನ್ಸ್ಪೆಕ್ಟರ್ ನಿರಂಜನ್, ಪಿಎಸ್ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.