ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೈಕ್ ಕಳ್ಳತನ: ಇಬ್ಬರು ಆರೋಪಿಗಳ ಸಹಿತ 8 ಬೈಕ್ ಗಳು ವಶ

ಹೊಸದಿಗಂತ ವರದಿ, ಮೈಸೂರು:

ಜಿಲ್ಲೆಯ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದು, 3.90 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.

ನoಜನಗೂಡಿನ ನೀಲಕಂಠನಗರದ ಶಿವಪ್ರಸಾದ್ ಹಾಗೂ ತ್ಯಾಗರಾಜ ಕಾಲೋನಿಯ ಶಶಾಂಕ ಬಂಧಿತ ಆರೋಪಿಗಳು. ನಂಜನಗೂಡಿನ ಮೈಸೂರು ಮುಖ್ಯರಸ್ತೆಯ ಕತ್ವಾಡಿಪುರ ಗೇಟ್ ಬಳಿ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಕಳ್ಳರು ಸಿಕ್ಕಿಬಿದ್ದಿದ್ದಾರೆ.

ಮೈಸೂರು ಕಡೆಯಿಂದ ನಂಜನಗೂಡು ಕಡೆಗೆ ನಂಬರ್ ಪ್ಲೇಟ್ ಇಲ್ಲದ ಹೀರೋ ಹೋಂಡಾ ಸ್ಪ್ಲೆಂಡರ್ ಪ್ಲಸ್ ಸ್ಕೂಟರ್ ಲ್ಲಿ ಆರೋಪಿಗಳು ತೆರಳುತ್ತಿದ್ದರು.ತಪಾಸಣೆ ವೇಳೆ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಕಳ್ಳತನ ಮಾಡಿರುವುದು ಗೊತ್ತಾಗಿದೆ. ತಕ್ಷಣವೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಈ ಹಿಂದೆಯೂ ಆರೋಪಿಗಳು ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.

ಮೈಸೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಮೋಟಾರ್ ಸೈಕಲ್, ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ 1 ಬಜಾಜ್ ಪಲ್ಸರ್, ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ 1 ಯಮಹ ಮೋಟರ್ ಸೈಕಲ್, ಜಯಲಕ್ಷಿ÷್ಮಪುರಂ ಠಾಣಾ ವ್ಯಾಪ್ತಿಯಲ್ಲಿ 1 ಮೋಟಾರ್ ಸೈಕಲ್ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1 ಮೋಟಾರ್ ಸೈಕಲ್, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1 ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ.

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಜರುಗಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss